ನ್ಯೂಸ್ ನಾಟೌಟ್ : ಉತ್ತರ ಪ್ರದೇಶದ ಜೌನ್ ಪುರದಲ್ಲಿ ಸೋಮವಾರ(ನ.18) ರಾತ್ರಿ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ ಮೀರಾಬಾಯಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಬಾತ್ ರೂಮ್ ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದೇ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ಬಾತ್ ರೂಮ್ ನಲ್ಲಿರುವ ಶವರ್ ನಲ್ಲಿ ಕ್ಯಾಮೆರಾ ಅಳವಡಿಸಿದ್ದನ್ನು ವಿದ್ಯಾರ್ಥಿನಿಯರು ಪತ್ತೆ ಹಚ್ಚಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ವಂದನಾ ಸಿಂಗ್ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಉಪಕುಲಪತಿಗಳು ವಿದ್ಯಾರ್ಥಿನಿಯರನ್ನು ಸಮಾಧಾನ ಪಡಿಸಲು ಯತ್ನಿಸಿದರು. ತಮ್ಮ ಫೋನ್ ನ ಕ್ಯಾಮೆರಾ ಡಿಟೆಕ್ಟರ್ ಆ್ಯಪ್ ನಲ್ಲಿ ಕ್ಯಾಮೆರಾ ಸಕ್ರಿಯವಾಗಿ ಕಾಣಿಸಿಕೊಂಡಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಇದೇ ವೇಳೆ ಕೆಲವು ವಿದ್ಯಾರ್ಥಿನಿಯರಿಗೆ ಅಪರಿಚಿತ ಸಂಖ್ಯೆಗಳಿಂದ ಬೆದರಿಕೆ ಸಂದೇಶಗಳು ಬಂದಿದ್ದು, ಇದು ಆತಂಕವನ್ನು ಹೆಚ್ಚಿಸಿದೆ. ಘಟನೆಯ ನಂತರ ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಬಂದರೂ ಕ್ಯಾಮೆರಾದ ಖಚಿತ ಸಾಕ್ಷ್ಯ ಸಿಕ್ಕಿಲ್ಲ. ಇನ್ನೂ ಯಾವುದೇ ಸೀಕ್ರೇಟ್ ಕ್ಯಾಮೆರಾ ಪತ್ತೆಯಾಗಿಲ್ಲ, ಆದರೆ ತನಿಖೆ ಮುಂದುವರಿದಿದೆ ಎಂದು ಉಪಕುಲಪತಿ ತಿಳಿಸಿದ್ದಾರೆ.
Click