ನ್ಯೂಸ್ ನಾಟೌಟ್: ಆಧುನಿಕ ಸುಳ್ಯದ ಶಿಕ್ಷಣ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಮತ್ತು ಸನ್ಮಾನ ಸಮಾರಂಭವನ್ನು ನ.24ರಂದು ಭಾನುವಾರ ಶ್ರೀ ಹರಿಹರೇಶ್ವರ ದೇವಸ್ಥಾನ ಕಲಾ ಮಂದಿರ ಹರಿಹರ ಪಲ್ಲತ್ತಡ್ಕದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷರಾಗಿರುವ ಡಾ| ಕೆ.ವಿ ಚಿದಾನಂದ ಅವರು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸೇವಾ ಸಂಘ (ರಿ) ಸುಳ್ಯ ಅಧ್ಯಕ್ಷ ಡಾ. ಎನ್ .ಎ. ಜ್ಞಾನೇಶ್ ವಹಿಸಲಿದ್ದಾರೆ. ಹರಿಹರ ಪಲ್ಲತ್ತಡ್ಕದ ಹಿರಿಯ ವೈದ್ಯ ಡಾ| ಚಂದ್ರಶೇಖರ ಕಿರಿಭಾಗ ಅವರನ್ನು ಸನ್ಮಾನಿಸಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್ ವಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಯೋಜನಾಧಿಕಾರಿ ಮಾಧವ ಗೌಡ, ಕೊಲ್ಲಮೊಗ್ರು- ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಅಧ್ಯಕ್ಷ ಹರ್ಷ ಕುಮಾರ್ ಡಿ.ಎಸ್ ಮತ್ತಿತರರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ) ಸುಳ್ಯ 2024, ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ) ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು ಮತ್ತು ಸುಬ್ರಹ್ಮಣ್ಯ ಇದರ ಸಹಭಾಗಿತ್ವದೊಂದಿಗೆ ಈ ಸ್ಮರಣೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.