ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್ನೆಂಸಿ ಕಲಾ ಸಂಗಮ ಅಂತರ್ ಕಾಲೇಜು ಪಿ.ಯು ಫೆಸ್ಟ್ ವಿಶೇಷ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಮಂಗಳವಾರ (ನ.26) ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಪರಿಷತ್ ಸದಸ್ಯರು ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಗದೀಶ್ ಎ.ಹೆಚ್ ಚಾಲನೆ ನೀಡಿದರು.
ಮುಖ್ಯ ಅತಿಥಿ ಮಡಿಕೇರಿಯ ಸೈಂಟ್ ಮೈಕಲ್ಸ್ ಪಿ.ಯು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಮಂತ್ ಕೆ ಎಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ| ರುದ್ರ ಕುಮಾರ್ ಎಂ ಎಂ ಪ್ರಾಸ್ತಾವಿಕ ಮಾತನಾಡಿ ವಿವಿಧ ಕಾಲೇಜಿನಿಂದ ಆಗಮಿಸಿದ ಸ್ಪರ್ಧಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಎನ್ನೆಂಪಿಯುಸಿ ಪ್ರಾಂಶುಪಾಲ ಮಿಥಾಲಿ ಪಿ ರೈ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಸಾಂಸ್ಕೃತಿಕ ಸಂಘದ ಸಂಘದ ಸಂಚಾಲಕರು ಹಾಗೂ ಉಪನ್ಯಾಸಕರಾದ ವಿಷ್ಣು ಪ್ರಶಾಂತ್, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕಿ ಡಾ| ಮಮತಾ ಕೆ, ಪಿ.ಟಿ.ಎ ಸಂಘದ ಅಧ್ಯಕ್ಷೆ ಶಶ್ಮಿ ಭಟ್ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ ಮಮತಾ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಪ್ರಾರ್ಥಿಸಿದರು. ಉಪನ್ಯಾಸಕರಾದ ವಿಷ್ಣು ಪ್ರಶಾಂತ್ ಸ್ವಾಗತಿಸಿದರು, ಉಪನ್ಯಾಸಕರಾದ ರತ್ನಾವತಿ ಡಿ ವಂದಿಸಿ ವಿದ್ಯಾರ್ಥಿನಿಯರಾದ ಅಕ್ಷತಾ ಹಾಗೂ ಅನ್ವಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.