ನ್ಯೂಸ್ ನಾಟೌಟ್: ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.23 ರಂದು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯದಲ್ಲಿ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಂತೋಡು ಗ್ರಾಮ ಪಂಚಾಯತ್ ಕಚೇರಿ ಬಳಿಯಿಂದ ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆ ನಡೆಯಲಿದ್ದು, ನಿವೃತ್ತ ಮುಖ್ಯ ಶಿಕ್ಷಕ ಹೊನ್ನಪ್ಪ ಮಾಸ್ತರ್ ಅಡ್ತಲೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
9:30ಕ್ಕೆ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅವರಿಂದ ರಾಷ್ಟ್ರಧ್ವಜಾರೋಹಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಹಸೀಲ್ದಾರ್ ಮಂಜುಳಾ ಅವರು ಪುಸ್ತಕ ಪ್ರದರ್ಶನದ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 10ರಿಂದ ಹಿರಿಯ ಸಾಹಿತಿ ಲೀಲಾ ದಾಮೋದರ ಸಮ್ಮೇಳನಾಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದ್ದು, ನರೇಂದ್ರ ರೈ ದೇರ್ಲ ಸಮ್ಮೇಳನ ನೆರವೇರಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಹೊಸ ಕೃತಿಗಳ ಬಿಡುಗಡೆಗೊಳಿಸಲಿದ್ದಾರೆ. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಕೆ ಆರ್ ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಉಪಸ್ಥಿತರಿರುತ್ತಾರೆ.
ಸಮ್ಮೇಳನದಲ್ಲಿ ಡಾ. ಪ್ರಭಾಕರ್ ಶಿಶಿಲರ ಕುಂತಿ ಕಾದಂಬರಿ, ಕಲ್ಲುರ್ಟಿಯ ಕುಕ್ಕುಟ ಕಥನಗಳು ಎಂಬ ಕಥಾಸಂಕಲನ, ಲೀಲಾ ದಾಮೋದರ ಅವರ ನದಿಯ ನಾದ ಕವನ ಸಂಕಲನ, ಸಂಗೀತ ರವಿರಾಜ್ ಚೆಂಬು ಅವರ ಪಯಸ್ವಿನಿಯ ತೀರದಲ್ಲಿ ಲಲಿತ ಪ್ರಬಂಧ ಮತ್ತು ಅಕ್ಕರೆಯ ಕಡೆಗೋಲು ಎಂಬ ವಿಮರ್ಶ ನಾಟಕ, ಪ್ರಕಾಶ್ ಮೂಡಿತ್ತಾಯ ಅವರ ಲಸಿಕೆಯ ಕಥೆ ಮತ್ತು ಮೌಡ್ಯವೇಕೆ ಇನ್ನೂ ಎಂಬ ವಿಜ್ಞಾನ ನಾಟಕ, ನಿರೀಕ್ಷಾ ಸುಲಾಯ ಅವರ ನನ್ನ ಮನಸ್ಸು ನನ್ನ ಕನಸು ಎಂಬ ಕವನ ಸಂಕಲನ ಬಿಡುಗಡೆಗೊಳ್ಳಲಿದೆ.
ಮಧ್ಯಾಹ್ನ 12 ರಿಂದ ಸಾಹಿತಿ ಶ್ರೀಮತಿ ವಿಮಲಾರುಣ ಪಡ್ಡಂಬೈಲು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಲೀಲಾಕುಮಾರಿ ತೊಡಿಕಾನ, ಹೆಚ್. ಭೀಮರಾವ್ ವಾಷ್ಟರ್, ಹೇಮಲತಾ ಕಜೆಗದ್ದೆ, ಶಿವಾದೇವಿ ಅವನಿಶ್ಚಂದ್ರ, ತೀರ್ಥರಾಮ ಹೊದ್ದೆಟ್ಟಿ, ವಿಜಯ್ ಕುಮಾರ್ ಕಾಣಿಚ್ಚಾರ್, ಮಮತಾ ರವೀಶ್ ಪಡ್ಡಂಬೈಲು ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30 ರಿಂದ 2 ಗಂಟೆಯ ತನಕ ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2ರಿಂದ 3ರ ವರೆಗೆ ಸಾಹಿತಿ ನಂದಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಿರಂಜನ ಶತಮಾನೋತ್ಸವ ಸ್ಮರಣೆ ವಿಚಾರಗೋಷ್ಠಿ ನಡೆಯಲಿದೆ. ಎಸ್ಡಿಎಂ ಕಾಲೇಜು ಉಜಿರೆಯ ಸಹಪ್ರಾಧ್ಯಾಪಕ ರಾಜಶೇಖರ ಹಳೆಮನೆ ಅವರು ನಿರಂಜನ ಬದುಕು ಬರಹ ಅವಲೋಕನ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 3 ರಿಂದ 4ರವರೆಗೆ ಪತ್ರಕರ್ತ ದುರ್ಗಾ ಕುಮಾರ್ ನಾಯರ್ ಕೆರೆ ಅವರು ಪರಿಸಮಾಪ್ತಿಯಲ್ಲಿ ಕನ್ನಡ ಭಾಷೆ ಅನ್ನದ ಭಾಷೆ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳ ಚರ್ಚಾಗೋಷ್ಠಿ ನಡೆಯಲಿದೆ. ಈ ಗೋಷ್ಠಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಅನುಷಾ ಕೆ., ಪೌರ್ಣಮಿ ಕೆ, ಸರಕಾರಿ ಪ್ರೌಢಶಾಲೆ ಮರ್ಕಂಜದ ಭೂಷಣ್ ಕೆಪಿ, ರೋಟರಿ ಪ್ರೌಢಶಾಲೆಯ ಶ್ರೀ ದುರ್ಗಾ ಯು, ಬೆಸ್ಟ್ ಕುರಿಯ ಕೋಸ್ ಪ್ರೌಢಶಾಲೆ ಗುತ್ತಿಗಾರಿನ ಜಾಕ್ಸನ್, ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡಿನ ಸೋಹನ್ ಪಿ. ಜೆ., ಕೆಪಿಎಸ್ ಬೆಳ್ಳಾರೆಯ ಅಂಜನಾ ವಿ. ಭಾಗವಹಿಸಲಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಸಮನ್ವಯಕಾರರಾಗಿ ಭಾಗವಹಿಸಲಿದ್ದಾರೆ. ಗಾಯಕರಾದ ಶ್ರೀ. ಕೆ.ಆರ್. ಗೋಪಾಲಕೃಷ್ಣ ಹಾಗೂ ಪೂರ್ಣಿಮಾ ಇವರಿಂದ ಗೀತ ಗಾಯನ ಕೂಡ ನಡೆಯಲಿದೆ.
ಸಾಯಂಕಾಲ 4ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ ಪಿ ಶ್ರೀನಾಥ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಕನ್ನಡ ಕಸ್ತೂರಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಧನಂಜಯ ಕುಂಬ್ಲೆ ಸಮಾರೋಪ ಭಾಷಣ ನೆರವೇರಿಸಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಇದರ ಡಾ. ಉಮ್ಮರ್ ಬೀಜದಕಟ್ಟೆ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಕಟಪೂರ್ವ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ, ತಾಲೂಕ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ಶೀತಲ್ ಗೌಡ ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದಲ್ಲಿ ಡಾ. ಶ್ವೇತಾ ಮಡಪ್ಪಾಡಿ ಅವರಿಗೆ ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ, ಹುಕ್ರಪ್ಪ ಉಳುವಾರು ಇವರಿಗೆ ರಕ್ಷಣಾ ಸೇವೆ, ಕುಮಾರಸ್ವಾಮಿ ತೆಕ್ಕುಂಜೆ ಇವರಿಗೆ ಸಾಹಿತ್ಯ ಕ್ಷೇತ್ರದಲ್ಲಿ, ಸರಸ್ವತಿ ಚಿದಾನಂದ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ, ಗಣೇಶ್ ಭಟ್ ಅವರಿಗೆ ಹಿರಿಯ ಲೆಕ್ಕ ಪರಿಶೋಧಕರು, ಕೆ.ಆರ್. ಪದ್ಮನಾಭ ಅವರಿಗೆ ಸಹಕಾರ/ ಸಮಾಜ ಸೇವೆ, ಡಾ. ಲೀಲಾದರ ಡಿ.ವಿ. ಅವರಿಗೆ ಆಡಳಿತ / ವೈದ್ಯಕೀಯ, ತೇಜೇಶ್ವರ ಕುಂದಲ್ಪಾಡಿ ಅವರಿಗೆ ಪತ್ರಿಕೋದ್ಯಮ, ಆನಂದ ಕಲ್ಲಗದ್ದೆ ಇವರಿಗೆ ಮಾಹಿತಿ ಮತ್ತು ತಂತ್ರಜ್ಞಾನ, ಸಲಿಂ ಸುಳ್ಯ ಇವರಿಗೆ ಸಮಾಜ ಸೇವೆ / ಉದ್ಯಮ ಕ್ಷೇತ್ರದಲ್ಲಿ, ಕೇಶವ ಪರವ ಇವರಿಗೆ ಭೂತಾರಾಧನೆ ಕ್ಷೇತ್ರದ ಸಾಧನೆಗಾಗಿ ಕನ್ನಡ ಕಸ್ತೂರಿ ಸನ್ಮಾನವನ್ನು ಪ್ರಧಾನ ನಡೆಯಲಿದೆ. ಬಳಿಕ ಸಂಜೆ 5.30 ರಿಂದ ಡಾ. ಶ್ವೇತಾ ಮಡಪ್ಪಾಡಿ ಮತ್ತು ಬಳಗದವರಿಂದ ಭಾವಗಾನ ಕನ್ನಡ ಗೀತೆಗಳ ಗಾಯನ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲ ಬೈಲ್ ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಅರೆಭಾಷೆ ಸಿರಿ ಸಂಸ್ಕೃತಿ -ನೃತ್ಯ ರೂಪಕ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.