ನ್ಯೂಸ್ ನಾಟೌಟ್: ಬೆಳಗಾವಿಯ ತಹಸೀಲ್ದಾರ್ ಕಚೇರಿಯೊಳಗೆ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ನ.5) ನಡೆದಿದೆ.
ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿಯ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.
ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್ ಹಾಗೂ ಡಿಸಿ ಮೊಹಮ್ಮದ್ ರೋಷನ್ ಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್ ಕೂಡ ಹಾಕಿದ್ದರು.
ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್ ಹಾಗೂ ಡಿಸಿ ಕಾರಣ ಎಂದು ವಾಟ್ಸಪ್ ನಲ್ಲಿ ಪೋಸ್ಟ್ ಕೂಡ ಮಾಡಿದ್ದರು ಎನ್ನಲಾಗಿದೆ. ಘಟನೆ ನಂತರ ಪೋಸ್ಟ್ ಡಿಲೀಟ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Click