- +91 73497 60202
- [email protected]
- November 23, 2024 5:47 AM
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್.ಐ.ಆರ್..! ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಮಾಹಿತಿ ಹರಡಿದ ಆರೋಪ..!
ನ್ಯೂಸ್ ನಾಟೌಟ್: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಹರನಗೇರಿ ರೈತ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್ ನೋಟಿಸ್ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಬರಹವನ್ನು ಸಾಮಾಜಿಕ ಜಾಲತಾಣದಿಂದ ಅಳಿಸಲಾಗಿದೆ.ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆಗೆ ಶರಣಾಗಿಲ್ಲ. ಅವರು ಸಾಲಬಾಧೆಯಿಂದ ನೊಂದಿದ್ದರು ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದವು. ಮೃತನ ಬಗ್ಗೆ ಪಿ.ಎಸ್.ಐ ಆಡೂರ ತನಿಖೆ ಕೈಗೊಂಡು, ಆತನು ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಅಂತಾ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿದ್ದರು. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂದು ಹಾವೇರಿ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು. ಈ ಕಾರಣದಿಂದ ಸಂಸದರ ವಿರುದ್ಧ ದೂರು ದಾಖಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ