ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವಿಭಾಗದ ವತಿಯಿಂದ ಗುರುವಾರ (ನ. 14) ವಿಶ್ವ ಮಧುಮೇಹ ದಿನವನ್ನು ಆಚರಿಸಲಾಯಿತು. ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮಧುಮೇಹದ ಕುರಿತು ಉಪಯುಕ್ತ ಮಾಹಿತಿ ಹಂಚಿಕೊಳ್ಳುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಧುಮೇಹದ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮಧುಮೇಹ ದಿನವನ್ನು ನವೆಂಬರ್ 14 ರಂದು ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ| ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ| ಸಿ ರಾಮಚಂದ್ರ ಭಟ್, ಡಾ| ಪ್ರಕಾಶ್ ರಾವ್, ಡಾ| ಸರ್ಫರಾಜ್ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.