- +91 73497 60202
- [email protected]
- January 4, 2025 3:24 AM
ನ್ಯೂಸ್ ನಾಟೌಟ್ : ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ವಿಚಾರವಾಗಿ ತಮಿಳುನಾಡು ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಈ ಘಟನೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಸರಿ ಪಡೆ ಆಂದೋಲನದ ಹಾದಿ ಹಿಡಿದಿದೆ. ಗುರುವಾರವೂ(ಡಿ.26) ಪ್ರತಿಭಟನೆ ವೇಳೆ ಪೊಲೀಸರು ವಿವಿಧೆಡೆ ಕಮಲ ನಾಯಕರನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಕೊಯಮತ್ತೂರಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ ಸಂಚಲನ ಮೂಡಿಸಿದೆ. ಸ್ಟಾಲಿನ್ ಸರ್ಕಾರ ಬೀಳುವವರೆಗೂ ಚಪ್ಪಲಿ ಹಾಕುವುದಿಲ್ಲ ಎಂದು ಶೂ ತೆಗೆದ್ದಾರೆ. ಸರ್ಕಾರದ ವರ್ತನೆಯನ್ನು ವಿರೋಧಿಸಿ 48 ಗಂಟೆಗಳ ಕಾಲ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಘೋಷಿಸಿದರು.ಚುನಾವಣೆಯಲ್ಲಿ ಗೆಲ್ಲುವವರೆಗೆ ಚಪ್ಪಲಿ ಧರಿಸುವುದಿಲ್ಲ ಎಂದು ಅಣ್ಣಾಮಲೈ ಶಪಥ ಮಾಡಿದ್ದಾರೆ. ದುಷ್ಟತನವನ್ನು ಕೊನೆಗೊಳಿಸಲು ರಾಜ್ಯದ ಆರು ಮುರುಘನ(ಕಾರ್ತಿಕೇಯಸ್ವಾಮಿ) ದೇವಸ್ಥಾನಗಳಿಗೆ ಭೇಟಿ ನೀಡಿ 48 ಗಂಟೆಗಳ ಕಾಲ ಉಪವಾಸ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಣ್ಣಾಮಲೈ ಮತ್ತು ತಮಿಳಿಸೈ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದರು. ಸಾರ್ವಜನಿಕ ಕ್ಷೇತ್ರದಲ್ಲಿ ಗೆದ್ದಿಲ್ಲ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ