- +91 73497 60202
- [email protected]
- December 4, 2024 11:56 PM
ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಸಾವು..! ಫಲಿಸದ ಚಿಕಿತ್ಸೆ
ನ್ಯೂಸ್ ನಾಟೌಟ್: ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಇಂದು(ಡಿ.2) ನಡೆದಿದೆ. ನವೀನ ನಾರಾಯಣ ಬೆಳಗಾಂವಕರ್ (13) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ.ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತ್ತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಡಲು ಸಾಧ್ಯವಾಗದೇ ಚಿಕಿತ್ಸೆಯ ವೇಳೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ