ನ್ಯೂಸ್ ನಾಟೌಟ್: ಇಂದು ಯತ್ನಾಳ್ ಕೇಂದ್ರ ನಾಯಕರನ್ನು ಭೇಟಿಯಾಗಲು ತೆರಳಿದ್ದರು, ಭೇಟಿಯ ಬಳಿಕ ಬಿಎಸ್ ವೈ ವಿಷಯದಲ್ಲಿ ಮೃದು ಧೋರಣೆ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು (ಡಿಸೆಂಬರ್ 04) ನವದೆಹಲಿಯಲ್ಲಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಬಿಚ್ಚಿಟ್ಟಿದ್ದಾರೆ. ಇದರ ಮಧ್ಯ ಇತ್ತ ಯಡಿಯೂರಪ್ಪ ಮಾತನಾಡಿ, ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅತ್ತ ದೆಹಲಿಯಲ್ಲಿ ಯತ್ನಾಳ್, ಬಿಎಸ್ವೈ ಮಾತನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಯತ್ನಾಳ್ ಸಾಫ್ಟ್ ಆದರಾ? ಎನ್ನುವ ಚರ್ಚೆಗಳು ಶುರುವಾಗಿವೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ. ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ ಎಂದು ಹೇಳಿದರು. ಈ ಮೂಲಕ ಬಿಎಸ್ವೈ ಪರೋಕ್ಷವಾಗಿ ಯತ್ನಾಳ್ ದಾರಿಗೆ ಬರಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದರು.
ಇನ್ನು ಅತ್ತ ದೆಹಲಿಯಲ್ಲಿ ಬೀಡುಬಿಟ್ಟಿರುವ ಯತ್ನಾಳ್, ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎನ್ನುವ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತ ಮಾಡಿದ್ದಾರೆ. ಇಷ್ಟು ದಿನ ಯಡಿಯೂರಪ್ಪ ಕುಟುಂಬದ ವಿರುದ್ಧ ನನ್ನ ಹೋರಾಟ ಎನ್ನುತ್ತಿದ್ದ ಯತ್ನಾಳ್, ಇದೀಗ ಏಕಾಏಕಿ ಬಿಎಸ್ವೈ ಮೇಲೆ ಸಾಫ್ಟ್ ಕಾರ್ನರ್ ಆಗಿ ಮಾತನಾಡಿದ್ದು ಅಚ್ಚರಿಕೆ ಕಾರಣವಾಗಿದೆ.
1 ಗಂಟೆ 15 ನಿಮಿಷ ಕಾಲ ಎಲ್ಲ ಸವಿಸ್ತಾರವಾಗಿ ಹೇಳಿದ್ದಾನೆ. ನಾನು ಹೇಳಿರುವ ಎಲ್ಲವನ್ನೂ ಸ್ವೀಕರಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ತಾರೆ. ವಕ್ಫ್ ಬೋರ್ಡ್ ವಿರುದ್ಧದ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದು, ಪಕ್ಷದ ಸಂಘಟನೆಯಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿಮ್ಮ ಭಾವನೆಗಳನ್ನು ನಾಯಕರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.