- +91 73497 60202
- [email protected]
- December 5, 2024 12:47 AM
ಸಿಎಂಗೆ ಧಿಕ್ಕಾರ ಕೂಗಿದವರಿಗೆ 1 ಲಕ್ಷ ರೂ. ಬಹುಮಾನ..! ಏನಿದು ಮಾಜಿ ಶಾಸಕ ಬಿಡುಗಡೆ ಮಾಡಿದ ಆಡಿಯೋ..?
ನ್ಯೂಸ್ ನಾಟೌಟ್: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿಗೆ ಭೇಟಿ ನೀಡಲಿದ್ದು, 1.4 ಲಕ್ಷ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ಅಲ್ಲದೇ ಬಹುಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ ನೇರೆವೇರಿಸಲಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ‘ಗೋ ಬ್ಯಾಕ್ ಸಿದ್ದರಾಮಯ್ಯ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ರೆ 1ಲಕ್ಷ ಬಹುಮಾನ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಸುರೇಶ ಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಬಸ್ ಕಳಿಸುತ್ತೇನೆ ಎಲ್ಲರೂ ಹೋರಾಟ ಮಾಡಬೇಕು. ಸಿಎಂ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಕಪ್ಪು ಬಾವುಟ ತೋರಿಸಬೇಕು. ಅಲ್ಲದೇ ಸಮಾವೇಶದಲ್ಲಿ ಧಿಕ್ಕಾರ ಕೂಗಿದವರಿಗೆ 1 ಲಕ್ಷ ಬಹುಮಾನ ನೀಡುತ್ತೇನೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ. ಈ ಸಮಾರಂಭದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಎಂದಿರುವ ಆಡಿಯೋ ಪ್ಲೇ ಮಾಡಿದ ಮಾಜಿ ಶಾಸಕ ಗೌರಿಶಂಕರ್, ಸಿಎಂ ಬಂದಾಗ ಪ್ರಚೋದನೆ ಮಾಡಿ ಎತ್ತಿಕಟ್ಟುವ ಯತ್ನ ಮಾಡ್ತಿದ್ದೀರಾ? ಆರ್ಎಸ್ಎಸ್ ಇದೇನಾ ಹೇಳಿಕೊಟ್ಟಿರೋದು, FIR ಆಗಿ ತನಿಖೆ ಆಗಲಿ ಎಂದು ವಾಗ್ದಾಳಿ ನಡೆಸಿದರು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ