ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆ – ಕಲರವ 2024′ ಡಿ.2 ಮತ್ತು 3ರಂದು ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉದ್ಘಾಟಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜನಾಧಿಕಾರಿಗಳಾದ ಡಾ. ಕವಿತಾ ಬಿ.ಎಂ., ಡಾ. ಸನತ್ ಕುಮಾರ್ ಡಿ.ಜಿ ಹಾಗೂ ಸಾಂಸ್ಕೃತಿಕ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಅಶ್ವಿನಿ ಭಟ್ ಹಾಗೂ ಚಿತ್ಕಲ ಭಾರಧ್ವಾಜ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವಿದ್ಯಾರ್ಥಿಗಳಾದ ಲಕ್ಷ್ಮಿ ಸುರೇಶ್ ಮತ್ತು ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ಕಾಲೇಜಿನ ವಿದ್ಯಾರ್ಥಿಗಳು, ಕಿರಿಯ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು 30ಕ್ಕೂ ಅಧಿಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದರು.