- +91 73497 60202
- [email protected]
- January 10, 2025 7:09 AM
ನ್ಯೂಸ್ ನಾಟೌಟ್: ಲಕ್ನೋದ ಸಂಭಲ್ ನಲ್ಲಿರುವ (Sambhal) ಶಾಹಿ ಜಾಮಾ ಮಸೀದಿಯ ಸುತ್ತ ಒತ್ತುವರಿ ತೆರವು ವೇಳೆ 46 ವರ್ಷ ಹಳೇಯ ದೇಗುಲ ಪತ್ತೆಯಾಗಿದೆ.ಸಂಭಲ್ ನಲ್ಲಿ ಹಿಂಸಾಚಾರ ನಡೆದಿದ್ದ ಮಸೀದಿ ಸುತ್ತಮುತ್ತ ಸರ್ಕಾರ ಒತ್ತುವರಿ ತೆರವು ಕಾರ್ಯ ಆರಂಭಿಸಿದೆ. ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳು ಪತ್ತೆಯಾಗಿವೆ. ನಖಾಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಂಕಿತ ಅಕ್ರಮ ವಿದ್ಯುತ್ ಸಂಪರ್ಕಗಳನ್ನು ಹೊಂದಿರುವ ಸ್ಥಳಗಳನ್ನು ಕೂಡ ಈ ಕಾರ್ಯಾಚರಣೆಯು ಗುರಿಯಾಗಿಸಿದೆ. ಸಂಭಲ್ ಸಿಒ ಅನುಜ್ ಕುಮಾರ್ ಚೌಧರಿ ಮಾತನಾಡಿ, ಈ ಪ್ರದೇಶದಲ್ಲಿ ದೇವಸ್ಥಾನವನ್ನು ಅತಿಕ್ರಮಣ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ನಾವು ಸ್ಥಳವನ್ನು ಪರಿಶೀಲಿಸಿದಾಗ ಅಲ್ಲಿ ಒಂದು ದೇವಸ್ಥಾನವನ್ನು ಪತ್ತೆ ಮಾಡಿದ್ದೇವೆಂದು ತಿಳಿಸಿದ್ದಾರೆ. ಹೆಚ್ಚುವರಿ ಎಸ್‌ಪಿ ಮಾತನಾಡಿ, ಕೆಲವರು ಮನೆ ನಿರ್ಮಿಸಿ ದೇವಸ್ಥಾನವನ್ನು ಒತ್ತುವರಿ ಮಾಡಿಕೊಂಡಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ದೇವಸ್ಥಾನವನ್ನು ಸ್ವಚ್ಛಗೊಳಿಸಲಾಗಿದ್ದು, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳಿವೆ. ಈ ಪ್ರದೇಶದಲ್ಲಿ ಹಿಂದೂ ಕುಟುಂಬಗಳು ವಾಸವಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ