- +91 73497 60202
- [email protected]
- December 5, 2024 12:12 AM
ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್..! 5 ದಿನಗಳ ಬಳಿಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..!
ನ್ಯೂಸ್ ನಾಟೌಟ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ ಕಡಬ ತಾಲೂಕಿನ ನೆಟ್ಟಣ ಸಮೀಪ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ.ಶಾಂತಪ್ಪ ಗೌಡ ಎಂಬವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಸುಮಾರು ಒಂದೂವರೆ ಕಿ.ಮೀ. ದೂರದ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ(ಡಿ.3) ಪತ್ತೆಯಾಗಿದೆ. ಸಂದೀಪ್ ನನ್ನು ಆತನ ಸ್ನೇಹಿತ ನೆಟ್ಟಣ ನಿವಾಸಿ ಪ್ರತೀಕ್ ನೆಟ್ಟಣ ಎಂಬಾತ ರೈಲು ನಿಲ್ದಾಣದ ಬಳಿಯ ಗುಡ್ಡೆಯಲ್ಲಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದು ಮೃತದೇಹವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದ ಸಂದೀಪ್ ನ. 27 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ. ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್ ನ ತಾಯಿ ಸರೋಜ ವಿಚಾರಿಸಿದಾಗ ಸಂದೀಪ್ ಸಂಜೆ ಕೆಲಸ ಮುಗಿಸಿ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಆತನ ಕಾರಿನಲ್ಲಿ ಹೋಗಿರುವುದಾಗಿ ಮಾಹಿತಿ ನೀಡಿದ್ದರು. ಹುಡುಕಾಡಿ ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜ ಕಡಬ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಂದೀಪ್ ನನ್ನು ಕಾರಿನಲ್ಲಿ ಕರೆದೊಯ್ದಿದ್ದ ಪ್ರತೀಕ್ ಹಾಗೂ ಇನ್ನೋರ್ವನನ್ನು ಪೊಲೀಸರು ರವಿವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ರಹಸ್ಯ ಬಯಲಾಗಿದೆ. ಕೊಲೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. Click here to Follow us on Facebook
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ