ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟು ವಿಡಿಯೋ ಮಾಡಿದ ಯುವಕ..! ತನಿಖೆ ಆರಂಭಿಸಿದ ಪೊಲೀಸರು

ನ್ಯೂಸ್ ನಾಟೌಟ್: ದೇವಸ್ಥಾನವೊಂದರಲ್ಲಿ ಯುವಕನೊಬ್ಬ ಭಗವಾನ್ ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್​ ಆಗಿದೆ. ಮಧ್ಯಪ್ರದೇಶದ ಜಬಲ್ಪುರದ ಗ್ವಾರಿಘಾಟ್‌ ನಲ್ಲಿರುವ ಶ್ರೀ ಕಾಲಭೈರವ ಮಂದಿರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಆರೋಪಿ ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ಯುವಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಜಬಲ್‌ಪುರ ಆನಂದ ಕಲಾದಗಿ ತಿಳಿಸಿದ್ದಾರೆ. 36 ಸೆಕೆಂಡುಗಳ ಕ್ಲಿಪ್‌ನಲ್ಲಿ, ಯಾವುದೇ ಭಕ್ತರು ದೇವರಿಗೆ ಸಿಗರೇಟ್ ಅರ್ಪಿಸಿದರೆ, ಅವರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಯುವಕ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಜಬಲ್‌ ಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ. Click