- +91 73497 60202
- [email protected]
- January 5, 2025 11:17 PM
ಮಳೆ ನೀರಿನಲ್ಲಿ ಆಟವಾಡುತ್ತಿರುವಾಗ ಚರಂಡಿಗೆ ಬಿದ್ದು ಕೊಚ್ಚಿ ಹೋದ 3 ವರ್ಷದ ಮಗು..! ಇಲ್ಲಿದೆ ಮನಕಲಕುವ ಘಟನೆ..!
ನ್ಯೂಸ್ ನಾಟೌಟ್ : ಮಳೆ ನೀರಿನಲ್ಲಿ ಆಟವಾಡುತ್ತಿರುವಾಗ ಚರಂಡಿಗೆ ಬಿದ್ದು 3 ವರ್ಷದ ಮಗು ಕೊಚ್ಚಿ ಹೋದ ಘಟನೆ ಇಂಡೋನೇಷ್ಯಾದ ಸುರಬಯಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆಟವಾಡುತ್ತಲೇ ಪುಟ್ಟ ಕಂದಮ್ಮ ಚರಂಡಿ ನೀರಿನಲ್ಲಿ ಮುಳುಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. View this post on Instagram A post shared by Tatak Pradana (@tatak_sinta_cell) ಡಿಸೆಂಬರ್ 24 ರಂದು ಈ ಘಟನೆ ನಡೆದಿದ್ದು, ತಡವಾಗಿ ವಿಡಿಯೋ ವೈರಲ್ ಆಗುತ್ತಿದೆ. ಮಳೆಗೆ ಮೂರು ಮಕ್ಕಳು ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನೆಟ್ಟಿಗರು ಮಗುವಿನ ಪೋಷಕರ ಮೇಲೆ ಕೋಪಗೊಂಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ