ನ್ಯೂಸ್ ನಾಟೌಟ್: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಡಿ.12ರ ಗುರುವಾರ ಬಂಧಿಸಿದ್ದಾರೆ.
ಉತ್ತರಪ್ರದೇಶದ ಬುಲಂದಶಾಹರ್ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತರಿಂದ 550 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ ತಂತ್ರಾಶದ ಮೂಲಕವೂ ತಿಳಿಸಬಹುದಾಗಿದ್ದು, ಮಾದಕ ವಸ್ತು ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್ಪಿ ಮನವಿ ಮಾಡಿದ್ದಾರೆ.
Click