ನ್ಯೂಸ್ ನಾಟೌಟ್: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿದೇವೇಂದ್ರ ಜಿ. ಫಡ್ನವಿಸ್ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಹೆಸರು ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನಾ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ನೂತನ ‘ಮಹಾಯುತಿ’ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Click