ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..! ರಸ್ತೆಗೆ ಉರುಳಿದ ಬೃಹತ್ ಬಂಡೆ..!

ನ್ಯೂಸ್ ನಾಟೌಟ್: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ(ಡಿ.3) ಬೆಳಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂ ತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇದರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಚಾಮುಂಡಿ ಬೆಟ್ಟದ ನಂದಿಗೆ ಹೋಗುವ ರಸ್ತೆಯೂ ಕುಸಿತಗೊಂಡಿತ್ತು. Click here to follow us on Facebook Click