- +91 73497 60202
- [email protected]
- December 18, 2024 8:26 PM
ನ್ಯೂಸ್ ನಾಟೌಟ್ : ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಮಂಗಳವಾರ(ಡಿ.17) ತಿಳಿಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ದಯಾನಂದ ತಿಳಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಏಕ ಸದಸ್ಯಪೀಠ ಆರೋಪಿ ನಂಬರ್ 1 ಪವಿತ್ರಾ ಗೌಡ, 2ನೇ ಆರೋಪಿಯಾಗಿರುವ ದರ್ಶನ್, ಇತರ ಆರೋಪಿಗಳಾದ ಆರ್ ನಾಗರಾಜು, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅವರಿಗೆ ಕಳೆದ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಇದೇ ಅವಧಿಯಲ್ಲಿ ಪವಿತ್ರಾ ಗೌಡ ಸೇರಿ 15 ಸಹ ಆರೋಪಿಗಳನ್ನು ಬಂಧಿಸಲಾಗಿತ್ತು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ