- +91 73497 60202
- [email protected]
- December 5, 2024 12:41 AM
ಹುಟ್ಟೂರಿನಲ್ಲೇ ಕಿರುತೆರೆ ನಟಿ ಶೋಭಿತಾ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ಇಂದೇ(ಡಿ.3) ಅಂತ್ಯಕ್ರಿಯೆ
ನ್ಯೂಸ್ ನಾಟೌಟ್: ಹೈದರಾಬಾದ್ ನಲ್ಲಿ ಆತ್ಮಹತ್ಯೆ ಶರಣಾಗಿದ್ದ ಕಿರುತೆರೆ ನಟಿ ಶೋಭಿತಾ ಮೃತದೇಹವನ್ನು ಅವರ ಹುಟ್ಟೂರಾದ ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ಇಂದು(ಡಿ.3) ತರಲಾಗಿದೆ. ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ವರದಿ ತಿಳಿಸಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಂದೇ(ಡಿ.3) ಶೋಭಿತಾ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್ ನಲ್ಲಿ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ, ಮೂವರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಶೋಭಿತಾ ಅಗಲಿದ್ದಾರೆ. FB PAGE : https://www.facebook.com/NewsNotOut2023 Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ