ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಐಪಿಎಸ್​ ಅಧಿಕಾರಿ ರಸ್ತೆ ಅಪಘಾತದಲ್ಲಿ ಸಾವು..! ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್(26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​ ಹಾಸನ ಜಿಲ್ಲೆಗೆ ಡಿವೈಎಸ್ ​ಪಿ ಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು. ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್​ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಹರ್ಷವರ್ಧನ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. Click