ನ್ಯೂಸ್ ನಾಟೌಟ್: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು.
https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದು ಇವರು ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ 600ಕ್ಕೆ 599 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶದೊಂದಿಗೆ ಐದನೇ ಸ್ಥಾನದಲ್ಲಿದೆ.
ಫಲಿತಾಂಶದ ಪ್ರಕಾರ ಒಟ್ಟಾರೆ ಹಾಜರಾದವರ ಪೈಕಿ ಶೇ 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಿರೀಕ್ಷೆಯಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.
2024–25 ರ ದ್ವಿತೀಯ ಪಿಯು ಪರೀಕ್ಷೆ–1 ಮಾರ್ಚ್ 1 ರಿಂದ ಆರಂಭವಾಗಿ ಮಾರ್ಚ್ 20ಕ್ಕೆ ಅಂತ್ಯವಾಗಿತ್ತು. ರಾಜ್ಯದ 5,050 ಪದವಿಪೂರ್ವ ಕಾಲೇಜುಗಳ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಇಂದು(ಎ.8) ವಿಚಾರಣೆಗೆ ದರ್ಶನ್ ಗೈರಾದದ್ದೇಕೆ..? ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್..!