- +91 73497 60202
- [email protected]
- January 8, 2025 3:23 PM
ನ್ಯೂಸ್ ನಾಟೌಟ್ : ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಮರವೊಂದು ಬಿದ್ದು 15 ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ಶನಿವಾರ(ಜ.4) ನಡೆದಿದೆ. ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ.ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್ ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್ ಗೆ ಬಳಸುವ ಮರ ಬಿದ್ದಿದೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ಆಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ದೃಢಪಡಿಸಿದ್ದಾರೆ. ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೇಜಸ್ವಿನಿ ವಾಸವಿ ವಿದ್ಯಾನಿಕೇತನ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ