- +91 73497 60202
- [email protected]
- January 22, 2025 7:26 PM
4 ಲಕ್ಷ ರೂ.ಗೆ 7 ವರ್ಷದ ಬಾಲಕನ ಮಾರಾಟ..! ಬಾಲಕನ ತಂದೆ ಸೇರಿದಂತೆ ನಾಲ್ವರು ಅರೆಸ್ಟ್..!
ನ್ಯೂಸ್ ನಾಟೌಟ್: ಕಳೆದ ಮೂರು ತಿಂಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಗಾವಿಯಲ್ಲಿ ಬೆಳಕಿಗೆ ಬಂದಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ 7 ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಶಿವಬಸಪ್ಪ ಮಗದುಮ್, ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಸೇರಿ ಬಾಲಕನನ್ನು ಬೆಳಗಾವಿ ನಗರದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಗೆ ಗಂಡು ಮಗು ಬೇಕಾಗಿತ್ತು ಎನ್ನಲಾಗಿದೆ. ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಮಗದುಮ್ ವಿವಾಹವಾಗಿದ್ದರು. ಆದರೆ, ಮಗದುಮ್ ಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಮಕ್ಕಳನ್ನು ಹೊಂದಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ಇದರಿಂದ ಬೇಸತ್ತು ಮಗದುಮ್(ಬಾಲಕನ ತಂದೆ) ಹುಡುಗನನ್ನು ಮಾರಾಟ ಮಾಡಿದ್ದರು ಎನ್ನಲಾಗಿದೆ. ನಾಲ್ಕು ತಿಂಗಳ ಹಿಂದೆ ಸಂಗೀತಾ ಅವರನ್ನು ಮದುವೆಯಾಗಲು ಮಗದುಮ್ ಗೆ ಲಕ್ಷ್ಮಿ ಸಹಾಯ ಮಾಡಿದ್ದಳು. ಬಳಿಕ ಸಂಚು ರೂಪಿಸಿ ಬಾಲಕನನ್ನು ಕಾರವಾರದ ಕೆಸ್ರೋಳಿಯಲ್ಲಿರುವ ಅನಸೂಯಾ ದೊಡ್ಮನಿ ಎಂಬುವರಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದಳು. ಬಳಿಕ ಅನಸೂಯಾ ಬಾಲಕನನ್ನು ಅನಾಥ ಎಂದು ಹೇಳಿ ದಿಲ್ಶಾದ್‌ಗೆ ಮಾರಾಟ ಮಾಡಿದ್ದಾಳೆ ಎಂದು ವರದಿ ಉಲ್ಲೇಖಿಸಿದೆ. ಬಾಲಕನ ತಾಯಿ ಸಂಗೀತಾ ಕಮ್ಮಾರ್ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಬೈಲಹೊಂಗಲ ಸಮೀಪದ ಗ್ರಾಮವೊಂದರಲ್ಲಿ ಬಾಲಕನನ್ನು ಪತ್ತೆ ಮಾಡಿದ್ದಾರೆ. ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್ ಮೂಲದ ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳಾಗಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ