ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ..! 13 ಕಿ.ಮಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ..!

ನ್ಯೂಸ್ ನಾಟೌಟ್ : ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ ಶುರುವಾಗಲಿದೆ. ಏರೋ ಇಂಡಿಯಾ ಏರ್ ಶೋಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಇದಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆ.2 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2025’ ನಡೆಯಲಿದೆ. ಈ ನಿಟ್ಟಿನಲ್ಲಿ ಜನವರಿ 23 ರಿಂದ ಫೆಬ್ರವರಿ 17 ರವರೆಗೂ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧಿಸಿದ್ದು, ಕ್ರೇನ್​ಗಳನ್ನು ಬಳಸದಂತೆ ಸೂಚಿಸಲಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಿಹರ್ಸಲ್​​ಗಾಗಿ ವಿಮಾನಗಳು ಹಾರಾಟ ನಡೆಸಲಿವೆ. ಹಾಗಾಗಿ ಯಲಹಂಕದ 13 ಕಿ.ಮಿ ಸುತ್ತಮುತ್ತ ಮಾಂಸ ಮಾರಾಟ ಹಾಗೂ ಉದ್ದಿಮೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಒಂದು ವೇಳೆ ನಿಮಯ ಉಲ್ಲಂಘನೆ ಮಾಡಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ಪ್ರಕಾರ ಕಾನೂನು ಕ್ರಮಕ್ಕೆ ಯಲಹಂಕ ವಲಯ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. Click