ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ,ಮಂಗಳೂರಿನಲ್ಲಿ ಎನ್‌ ಐಎ ಘಟಕ ಸ್ಥಾಪಿಸುವಂತೆ ಮನವಿ

ನ್ಯೂಸ್‌ ನಾಟೌಟ್‌: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಜ.3ರ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕರಾವಳಿ ತೀರದ ಸುರಕ್ಷತೆ ದೃಷ್ಟಿಯಿಂದ ಭಾರತೀಯ ಕೋಸ್ಟ್‌ ಗಾರ್ಡ್‌ ಅಕಾಡೆಮಿ ಸ್ಥಾಪನೆ ಯೋಜನೆ ಅನುಷ್ಠಾನ, ದಕ್ಷಿಣ ಕನ್ನಡದಲ್ಲಿ ಸೈನಿಕ ಶಾಲೆ-ಮಿಲಿಟರಿ ನೆಲೆ ಸ್ಥಾಪಿಸುವುದು, ಮಂಗಳೂರು-ಬೆಂಗಳೂರು ನಡುವಿನ ರೈಲು ಹಾಗೂ ರಸ್ತೆ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು ಸೇರಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷತೆ ಹೆಚ್ಚಳಕ್ಕೆ ಪೂರಕವಾದ ಹಲವು ಪ್ರಮುಖ ಬೇಡಿಕೆ ಒಳಗೊಂಡಿರುವ ಮನವಿಯನ್ನು ಇದೇ ವೇಳೆ ಸಂಸದ ಕ್ಯಾ. ಚೌಟ ಅವರು ಗೃಹ ಸಚಿವ ಅಮಿತ್‌ ಶಾ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಸಂಸದರಾದ ಬಳಿಕ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಮೊದಲ ಬಾರಿಗೆ ಅಧಿಕೃತವಾಗಿ ಅಮಿತ್‌ ಶಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಕ್ಯಾ. ಚೌಟ, ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಲೋಚಿಸಿದ್ದು, ಈ ವೇಳೆ ಗೃಹಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. Click