- +91 73497 60202
- [email protected]
- January 22, 2025 1:16 PM
ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ಶರವಣ ಎಂಬ ಇಬ್ಬರು ಬಂಧಿತ ಆರೋಪಿಗಳಾಗಿದ್ದು, ಕೆ.ಆರ್ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲು ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಬಳಿ ಬಸ್ ಗಾಗಿ ಕಾಯುತ್ತಿರುವಾಗ ಈ ಘಟನೆ ನಡೆದಿದೆ. ಯಲಹಂಕ ಕಡೆಗೆ ಬಸ್ ಬಾರದ ಕಾರಣ ಬಸ್ ಎಲ್ಲಿ ಬರುತ್ತೆ ಅಂತಾ ದುಷ್ಕರ್ಮಿಗಳನ್ನ ವಿಚಾರಿಸಿದ್ದಾರೆ. ಬಸ್ ಬರುವ ಜಾಗ ತೋರಿಸುತ್ತೇವೆ ಅಂತಾ ಬಸ್ ನಿಲ್ದಾಣದ ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್ ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಅತ್ಯಾಚಾರ ಮಾಡಿ ಮಹಿಳೆಯ ಮೇಲಿದ್ದ ಆಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ವಿಶೇಷ ತಂಡಗಳನ್ನ ರಚಿಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಇಂದು(ಜ.21) ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ