ನ್ಯೂಸ್ ನಾಟೌಟ್ : ಚಾಂಪಿಯನ್ಸ್ ಟ್ರೋಫಿ ಕೂಟ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ತಲಾ 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕರಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿರುವುದು ವಿಶೇಷ. ಆಸೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿದ್ದು ಕೂಟದಲ್ಲಿ ಕಣಕ್ಕಿಳಿಯಲಿದ್ದಾರಾ..? ಅನ್ನುವ ಬಗ್ಗೆ ಖಚಿತತೆ ಇಲ್ಲ.
ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅರ್ಷದೀಪ್ ಸಿಂಗ್ಗೆ ಸ್ಥಾನ ನೀಡಲಾಗಿದ್ದು ಹಾಗೆಯೇ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಲಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಶಮಿ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಶಮಿ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಚಾಂಪಿಯನ್ಸ್ ಟ್ರೋಫಿಗಾಗಿಯೂ ಮೊಹಮ್ಮದ್ ಶಮಿ ಅವರಿಗೆ ಸ್ಥಾನ ಸಿಕ್ಕಿರುವುದು ವಿಶೇಷ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ರವೀಂದ್ರ ಜಡೇಜಾ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್.