ನ್ಯೂಸ್ ನಾಟೌಟ್: ಯುವಕನೇ ಅರಣ್ಯ ಇಲಾಖೆಯವರಿಗೆ ಚಿರತೆ ಹಿಡಿದು ಕೊಟ್ಟಿದ್ದಾನೆ. ತುಮಕೂರಿನ ತಿಪಟೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ.
ಊರಿಗೆ ಚಿರತೆ ನುಗ್ಗಿದ ವಿಚಾರ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಬಲೆಯೊಂದಿಗೆ ಚಿರತೆ ಹಿಡಿಯುವ ಕಾರ್ಯಾಚರಣೆಗೆ ಸಿದ್ಧರಾಗಿ ಬಂದಿದ್ದಾರೆ. ಆದರೆ ಅರಣ್ಯ ಇಲಾಖೆಯವರ ಕೈಗೆ ಚಿರತೆ ಸಿಕ್ಕಿಲ್ಲ, ಇದೇ ವೇಳೆ ಅಲ್ಲಿದ್ದ ಯುವಕನೋರ್ವ ಚಿರತೆಯ ಬಾಲದಲ್ಲಿ ಹಿಡಿದಿದ್ದಾನೆ. ಆತನ ಅದೃಷ್ಟ ಚೆನ್ನಾಗಿತ್ತೇನೋ ಚಿರತೆ ತನ್ನ ಬಾಲ ಹಿಡಿದವನ ಮೇಲೆ ತಿರುಗಿ ದಾಳಿ ಮಾಡಿಲ್ಲ, ಒಂದು ವೇಳೆ ಚಿರತೆ ದಾಳಿ ಮಾಡಿದ್ದರೆ ದೊಡ್ಡ ಅನಾಹುತ ಆಗುವುದರಲ್ಲಿತ್ತು.
ಇತ್ತ ಯುವಕ ಚಿರತೆ ಹಿಡಿದ ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಮೇಲೆ ಬಲೆ ಹಾಕಿದ್ದು, ಅದನ್ನು ರಕ್ಷಿಸಿ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಂದಹಾಗೆ ಹೀಗೆ ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗೆ ನೆರವಾದ ವ್ಯಕ್ತಿಯನ್ನು ಆನಂದ್ ಎಂದು ಗುರುತಿಸಲಾಗಿದೆ.
Click