ನ್ಯೂಸ್ ನಾಟೌಟ್: ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಹಸುಗಳ ಮಾಲಿಕರಿಗೆ ಮೂರು ಹಸುಗಳನ್ನು ದಾನ ನೀಡಿದ್ದಾರೆ.
ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, “ಹಸು ನಿರಾಕರಿಸಿದ್ದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ” ಎಂದು ಹೇಳಿದ್ದಾರೆ.
Click