- +91 73497 60202
- [email protected]
- January 6, 2025 2:19 PM
ಸಿಲಿಂಡರ್ ಸ್ಫೋಟದಲ್ಲಿ ಪವಾಡ ಸದೃಶವಾಗಿ ಬದುಕುಳಿದ 12 ವರ್ಷದ ಅಯ್ಯಪ್ಪ ಮಾಲಾಧಾರಿ..! ಬಾಲಕನ ತಂದೆ ಸಾವು..!
ನ್ಯೂಸ್ ನಾಟೌಟ್ : ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರ್ಘಟನೆಯಲ್ಲಿ ಈವರೆಗೆ 8 ಜನ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಒಬ್ಬ ಮಾಲಾಧಾರಿ ಮಾತ್ರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಮಾಲಾಧಾರಿ ವಿನಾಯಕ್ ಬಾರಕೇರ ಬಹುತೇಕ ಚೇತರಿಸಿಕೊಂಡಿದ್ದು, ಇಂದು(ಜ.1) ಅಥವಾ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ. 12 ವರ್ಷದ ವಿನಾಯಕ್ ಆರೋಗ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಡಿಸ್ಚಾರ್ಜ್ ಮಾಡಲಾಗುವುದು ಎನ್ನಲಾಗಿದೆ.ಡಿಸೆಂಬರ್ 22 ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಯಲ್ಲಿ ಸಿಲಿಂಡರ್ ಸ್ಪೋಟವಾಗಿತ್ತು. ಘಟನೆಯಲ್ಲಿ 9 ಜನ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. 9 ಜನರ ಪೈಕಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಲಿಂಗರಾಜ ಬೀರನೂರ, ಮಂಜು ವಾಗ್ಮೋಡೆ, ರಾಜು ಮೂಗೇರಿ, ತೇಜಸ್ವರ್ ಸುತಾರೆ, ಶಂಕರ್ ಊರ್ಬಿ, ಪ್ರಕಾಶ್ ಬಾರಕೇರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 12 ವರ್ಷ ವಯಸ್ಸಿನ ವಿನಾಯಕ್ ಬಾರಕೇರ ಮಾತ್ರ ಗುಣಮುಖನಾಗಿದ್ದು, ಈತನ ತಂದೆ ಪ್ರಕಾಶ್ ಬಾರಕೇರ ಮಂಗಳವಾರ ನಸುಕಿನಲ್ಲಿ ಕೊನೆಯುಸಿರೆಳೆದಿದ್ದರು. ವಿನಾಯಕ್ಗೆ ಶೇಕಡಾ 25 ರಷ್ಟು ಸುಟ್ಟ ಗಾಯಗಳಾಗಿದ್ದವು.ಸಿಲಿಂಡರ್ ಸ್ಫೋಟ ಸಂಭವಿಸಿದಾಗ ಮೊದಲು ಮಗನನ್ನು ಕರೆದುಕೊಂಡು ಹೊರಗೇ ಬಂದಿದ್ದೇ ಪ್ರಕಾಶ್ ಬಾರಕೇರ ಆಗಿದ್ದರು. ಸುಟ್ಡ ಗಾಯಗಳಿಂದ ನರಳಾಡುತ್ತಿದ್ದರೂ ಮಗನನ್ನು ಕಾಪಾಡಲು ಓಡೋಡಿ ಬಂದಿದ್ದರು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ