ನಟ ದರ್ಶನ್ ಗನ್ ಲೈಸೆನ್ಸ್ ರದ್ದು..! ದರ್ಶನ್ ಮನವಿ ತಿರಸ್ಕರಿಸಿದ ಪೊಲೀಸರು..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಪ್ರಕರಣದ ಆರೋಪಿ, ನಟ ದರ್ಶನ್​ ಬಂದೂಕು ಪರವಾನಗಿಯನ್ನು ಪೊಲೀಸ್ ಇಲಾಖೆ ರದ್ದು ಮಾಡಿದೆ. ಸೆಲೆಬ್ರಿಟಿ ಆಗಿದ್ದ ದರ್ಶನ್, ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು ಪೊಲೀಸರಿಂದ ಈ ಹಿಂದೆ ಪಡೆದುಕೊಂಡಿದ್ದರು. ಆದರೆ ಇತ್ತೀಚೆಗಷ್ಟೆ ಪೊಲೀಸರು, ರೇಣುಕಾಸ್ವಾಮಿ ಪ್ರಕರಣದ ಉದಾಹರಣೆ ನೀಡಿ ದರ್ಶನ್ ​ರ ಬಂದೂಕು ಪರವಾನಗಿಯನ್ನು ರದ್ದು ಮಾಡುವುದಾಗಿ ಹೇಳಿದ್ದರು. ಪೊಲೀಸರಿಗೆ ಪತ್ರ ಬರೆದಿದ್ದ ದರ್ಶನ್, ತಮ್ಮ ಬಂದೂಕು ಲೈಸೆನ್ಸ್ ಅನ್ನು ರದ್ದು ಮಾಡದಂತೆ ಮನವಿ ಮಾಡಿದ್ದರು. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ಹೇಳಿದ್ದರು. ಆದರೆ ದರ್ಶನ್ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ, ರೇಣುಕಾಸ್ವಾಮಿ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ​ಗೆ ಹೈಕೋರ್ಟ್​ ನಿಯಮಿತ ಜಾಮೀನು ನೀಡಿದೆ. ದರ್ಶನ್ ಮಾತ್ರವಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಲಾಗಿದೆ. ಆದರೆ ಪೊಲೀಸರು, ದರ್ಶನ್ ​ಗೆ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇನ್ನು ನಟ ದರ್ಶನ್, ರೇಣುಕಾಸ್ವಾಮಿ ಪ್ರಕರಣದ ತನಿಖೆ ವೇಳೆ ತಮ್ಮಿಂದ ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣವನ್ನು ಮರಳಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. Click