ದರ್ಶನ್ ಮತ್ತು ಗ್ಯಾಂಗ್ ​ಗೆ ಮತ್ತೆ ಜೈಲು ಸೇರುವ ಆತಂಕ..! ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಗೆ ಡೇಟ್ ಫಿಕ್ಸ್..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಕೇಸ್​ ಆರೋಪಿ ದರ್ಶನ್ ಹಾಗೂ ಗ್ಯಾಂಗ್ ​ಗೆ ಜಾಮೀನು ಸಿಕ್ಕ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ. ಜೂನ್ 11ರಂದು ದರ್ಶನ್ ರೇಣುಕಾ ಸ್ವಾಮಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದರು. ಕೆಳಹಂತದ ಕೋರ್ಟ್​​ನಲ್ಲಿ ಅವರ ಜಾಮೀನು ಅರ್ಜಿ ವಜಾ ಆಯಿತು. ಆ ಬಳಿಕ ಹೈಕೋರ್ಟ್​ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಕೆಲ ದಿನಗಳ ಬಳಿಕ ಪೂರ್ಣ ಪ್ರಮಾಣದ ಜಾಮೀನು ಪಡೆದುಕೊಂಡರು. ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಶ್​​​ ಕೂಡ ಜಾಮೀನು ಪಡೆದಿದ್ದಾರೆ. ಇದನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿದೆ. Click