ನ್ಯೂಸ್ ನಾಟೌಟ್: ಬಿಬಿಎಂಪಿ ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಇಂದು(ಜ.4) ನಡೆದಿದೆ. ದ್ವಿಚಕ್ರ ವಾಹನದ ಮೇಲೆ ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಥಣಿಸಂದ್ರ ಸರ್ಕಲ್ ಬಳಿ ಶನಿವಾರ ಬೆಳಗ್ಗೆ 11.20ರ ಸುಮಾರಿಗೆ ಅಪಘಾತ ನಡೆದಿದ್ದು, ಬಿಬಿಎಂಪಿ ಲಾರಿ ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನೆಲಕ್ಕೆ ಬಿದ್ದ ಇಬ್ಬರು ಮಹಿಳೆಯರ ಮೇಲೂ ಲಾರಿ ಹರಿದಿದೆ. ಸುಮಾರು 30 ರಿಂದ 35 ವರ್ಷ ವಯಸ್ಸಿನ ನಾಜಿಯಾ ಸುಲ್ತಾನ ಹಾಗೂ ನಾಜಿಯ ಇರ್ಫಾನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಗೋವಿಂದಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೆಣ್ಣೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಗಾದಿಲಿಂಗ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
Click