- +91 73497 60202
- [email protected]
- January 8, 2025 12:53 AM
ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ ಪ್ರಕರಣ..! ಅಮಾನತ್ತುಗೊಂಡಿದ್ದ ಡಿ.ವೈ.ಎಸ್.ಪಿ ರಾಮಚಂದ್ರಪ್ಪ ಬಂಧನ..!
ನ್ಯೂಸ್ ನಾಟೌಟ್: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಹಿನ್ನೆಲೆ ಸೇವೆಯಿಂದ ಅಮಾನತ್ತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಪೊಲೀಸರು ಜ.3 ರಾತ್ರಿ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪನನ್ನು ಅಮಾನತ್ತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿತ್ತು.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ