- +91 73497 60202
- [email protected]
- January 8, 2025 12:45 AM
ವಿಟ್ಲ: ಈಡಿ ಅಧಿಕಾರಿಗಳ ವೇಷದಲ್ಲಿ ಬಂದು 30 ಲಕ್ಷ ರೂ. ದೋಚಿದ ಗ್ಯಾಂಗ್..! ಸುಮಾರು 2 ಗಂಟೆಗಳ ಕಾಲ ತನಿಖೆಯ ನಾಟಕ..!
ನ್ಯೂಸ್ ನಾಟೌಟ್: ನಾವು ಈಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ವಿಟ್ಲದ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಢೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ