ನ್ಯೂಸ್ ನಾಟೌಟ್: 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು.
ಅಂತೆಯೇ ಸುಳ್ಯ ತಾಲೂಕಿನ ಗೂನಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಸಂಭ್ರಮ-ಸಡಗರದಿಂದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಧ್ವಜಾರೋಹಣವನ್ನು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರವೀಂದ್ರ ಎನ್ ನೆರವೇರಿಸಿದರು. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರಾದ ಭವಾನಿ ಪಿ., ಎಸ್ ಡಿಎಂಸಿ ಉಪಾಧ್ಯಕ್ಷೆ ವಿನೋದ ಕುಮಾರಿ, ಶಿಕ್ಷಕರಾದ ಭವಾನಿ ಶಂಕರ್, ದೇವಕಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ದೊಡ್ಡಡ್ಕ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.