- +91 73497 60202
- [email protected]
- January 9, 2025 10:29 AM
ದೇಶದಲ್ಲಿ HMPV ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ..! ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ..!
ನ್ಯೂಸ್ ನಾಟೌಟ್: ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಹಲವರು ಇದನ್ನು ಸಾಮಾನ್ಯ ವೈರಸ್ ಎಂದು ಹೇಳುತ್ತಿದ್ದಾರೆ ಆದರೆ, ಕೇಂದ್ರ ಆರೋಗ್ಯ ಇಲಾಖೆ ಇದರ ಬಗ್ಗೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ , ಕೇಂದ್ರದ ಸಿದ್ಧತೆಗಳು ಮತ್ತು ಹೊಸ ವೈರಸ್ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾವು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ ಮತ್ತು ನೆರೆಯ ದೇಶಗಳಲ್ಲಿ ವೈರಸ್ ನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ನಾವು ಸಿದ್ಧರಿದ್ದೇವೆ, ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ನಾವು ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದರು. ಇದು ಹೊಸ ವೈರಸ್ ಅಲ್ಲ, 2001ರಲ್ಲಿಯೇ ವೈರಸ್ ಅನ್ನು ಗುರುತಿಸಲಾಗಿದೆ ಎಂದು ಜೆಪಿ ನಡ್ಡಾ ಹೇಳಿದರು. 7 ಹಾಗೂ 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಿಗೆ ಸೋಂಕು ತಗುಲಿದೆ, ಇಬ್ಬರೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಜನವರಿ 3 ರಂದು ಜ್ವರ ಮತ್ತು ಕೆಮ್ಮು ಚಿಕಿತ್ಸೆಗಾಗಿ ಮಕ್ಕಳನ್ನು ನಗರದ ರಾಮದಾಸ್‌ಪೇಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗನಿರ್ಣಯ ಮಾಡಲಾಯಿತು. ಸಚಿವಾಲಯದ ಮಾಹಿತಿ ಪ್ರಕಾರ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಎರಡನೇ ಪ್ರಕರಣವು 8 ತಿಂಗಳ ಗಂಡು ಶಿಶುವಿನಲ್ಲಿ ಪತ್ತೆಯಾಗಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಎರಡು ಶಿಶುಗಳಿಗೂ ಯಾವುದೇ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವಿಲ್ಲ ಎಂದು ICMR ದೃಢಪಡಿಸಿದೆ. ಇದರ ಬೆನ್ನಲ್ಲೇ ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿತ್ತು. ಮತ್ತೊಂದೆಡೆ ಇದೀಗ ಚೆನ್ನೈನಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ನಾಗ್ಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 7ಕ್ಕೆ ತಲುಪಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ