- +91 73497 60202
- [email protected]
- January 22, 2025 7:29 PM
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು..! ಏನಿದು ಪ್ರಕರಣ..?
ನ್ಯೂಸ್ ನಾಟೌಟ್: ಅಲ್-ಖಾದಿರ್ ಟ್ರಸ್ಟ್ ಗೆ ಸಂಬಂಧಿಸಿದ ಭೂ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಇಮ್ರಾನ್ ಖಾನ್ ಮೇಲಿದ್ದ ಆರೋಪ ಸಾಬೀತಾದ ಬೆನ್ನಲ್ಲೇ ಇಂದು(ಜ.17) ರಾವಲ್ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿತು. ಇಮ್ರಾನ್ ಖಾನ್ ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ. ಇಮ್ರಾನ್ ಖಾನ್ ನ್ನು ಈ ಹಿಂದೆ ಅಲ್-ಖಾದಿರ್ ಟ್ರಸ್ಟ್ ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿತ್ತು. ತಮ್ಮ ಅಧಿಕಾರಾವಧಿಯಲ್ಲಿ ಪಂಜಾಬ್ ನ ಝೀಲಂನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಇಮ್ರಾನ್ ಖಾನ್ ಭರವಸೆ ನೀಡಿದ್ದರು. ಈ ಭರವಸೆಯ ಭಾಗವಾಗಿ ಖಾನ್ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ ಸ್ಥಾಪಿಸಿದ್ದರು. ಅದರಲ್ಲಿ ಬೀಬಿ, ಆಪ್ತ ಸಹಾಯಕರಾಗಿದ್ದ ಬುಖಾರಿ ಮತ್ತು ಬಾಬರ್ ಅವರನ್ನು ಪದಾಧಿಕಾರಿಗಳಾಗಿ ನೇಮಿಸಲಾಗಿತ್ತು. ಈ ಸಂಬಂಧ ಆಗಿನ ಪಿಟಿಐ ಸರ್ಕಾರ ಮತ್ತು ಆಸ್ತಿ ಉದ್ಯಮಿ ನಡುವೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದಿಂದ ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್ ಗಳ ನಷ್ಟವಾಗಿದೆ. ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು 458 ಎಕರೆಗೂ ಹೆಚ್ಚು ಭೂಮಿ ಪಡೆದು ಲಾಭವನ್ನು ಪಡೆದ ಆರೋಪ ಇಮ್ರಾನ್ ಖಾನ್ ಮೇಲಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ