- +91 73497 60202
- [email protected]
- January 9, 2025 10:00 PM
ಇಸ್ರೋಗೆ ನೂತನ ಅಧ್ಯಕ್ಷರ ನೇಮಕ, ಬಾಹ್ಯಾಕಾಶ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಅನುಭವವಿರುವ ವಿ ನಾರಾಯಣನ್ ಗೆ ಅಧಿಕಾರ
ನ್ಯೂಸ್ ನಾಟೌಟ್: ಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿಯೂ ಈ ಕುರಿತು ಅಧಿಸೂಚನೆ ಹೊರಡಿಸಿದೆ. ವಿ ನಾರಾಯಣನ್ ಅವರ ನೇಮಕವು ಜನವರಿ 14 ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ ನಾರಾಯಣನ್ ಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ. ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್ನಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.ಕೇಂದ್ರ ಸಂಪುಟದ ನೇಮಕಾತಿ ಸಮಿತಿ 2025ರ ಜನವರಿ 7ರಂದು ಈ ಕುರಿತ ಅಧಿಕೃತ ಆದೇಶ ಹೊರಡಿಸಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ