ನ್ಯೂಸ್ ನಾಟೌಟ್ : ನಾಯಿಯ ಮೇಲೆ ಯುವಕನೋರ್ವ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.
ನೆರೆಮನೆಯ ಯುವಕ ಮನೋಜ್ ಕುಮಾರ್ ಕೃತ್ಯವೆಸಗಿರುವುದಾಗಿ ಆರೋಪಿಸಲಾಗಿದೆ. ಮನೆಯೊಂದರ ಶೆಡ್ ನಲ್ಲಿ ಕಟ್ಟಿ ಹಾಕಿದ್ದ ನಾಯಿಯ ಮೇಲೆ ಮನೋಜ್ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡು ನಿತ್ರಾಣವಾಗಿದ್ದ ನಾಯಿ 2-3 ದಿನಗಳಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ. ಸಿಸಿಟಿವಿ ಪರಿಶೀಲನೆ ವೇಳೆ ಯುವಕ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ.
ಘಟನೆಯ ಬಗ್ಗೆ ವಿಚಾರಿಸಿದಾಗ ನಾಯಿ ಕೋಳಿ ಹಿಡಿದ ವಿಚಾರಕ್ಕೆ ಈ ರೀತಿ ಹಿಂಸೆ ನೀಡಿದ್ದಾನೆ ಎನ್ನಲಾಗಿದೆ. ತನ್ನ ಕೋಳಿಯನ್ನು ನಾಯಿ ಹಿಡಿದಿದೆ ಎಂದು ಯುವಕ ಹೇಳಿದ್ದಾನೆ. ಅದೇ ವಿಚಾರಕ್ಕೆ ನಾಯಿಯ ತಲೆಗೆ ಹೊಡೆದು ಯುವಕ ಗಾಯಗೊಳಿಸಿದ್ದ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಟ್ಯಾಗ್ ಮಾಡಿ ದೂರು ನೀಡಲಾಗಿದೆ.
Click