- +91 73497 60202
- [email protected]
- January 22, 2025 10:32 PM
ನ್ಯೂಸ್ ನಾಟೌಟ್ : ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ , ಕೇವಲ 57 ದಿನಗಳಲ್ಲೇ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರೋಪಿ 33 ವರ್ಷದ ಸಂಜಯ್ ರಾಯ್ ದೋಷಿ ಎಂದು ಹೇಳಿದ್ದಾರೆ. ಆದರೆ ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸುವುದಾಗಿ ತಿಳಿಸಿದೆ.ಆಸ್ಪತ್ರೆಯಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ರಾಯ್ ನನ್ನು ಕೊಲೆಯ ಮರುದಿನ ಬಂಧಿಸಲಾಯಿತು ಮತ್ತು ಅಂದಿನಿಂದ ಜೈಲಿನಲ್ಲಿ ಇರಿಸಲಾಗಿದೆ. ತಪ್ಪಿತಸ್ಥ ರಾಯ್ ಗೆ ಮರಣದಂಡನೆ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ನ್ಯಾಯಾಲಯವು ನವೆಂಬರ್ 11 ರಂದು ಪ್ರಕರಣದ ವಿಚಾರಣೆ ಆರಂಭಿಸಿದ್ದು, ಸುಮಾರು 50 ಸಾಕ್ಷಿಗಳಿಂದ ಸಾಕ್ಷ್ಯವನ್ನು ಆಲಿಸಿದೆ, ಬಳಿಕ ಆತನೇ ಅಪರಾಧಿ ಎನ್ನಲಾಗಿದ್ದು, ಶಿಕ್ಷೆಯನ್ನು ಜ.20ಕ್ಕೆ ಪ್ರಕಟಿಸಲಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ