- +91 73497 60202
- [email protected]
- January 22, 2025 7:16 PM
ಸ್ಥಳೀಯ ವ್ಯಕ್ತಿಯ ಸಹಾಯದಿಂದಲೇ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ..! ಪೊಲೀಸ್ ತನಿಖೆಯಲ್ಲಿ ಹಲವು ರಹಸ್ಯ ಬಹಿರಂಗ..!
ನ್ಯೂಸ್ ನಾಟೌಟ್ : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಚಿನ್ನಾಭರಣವನ್ನು ದೋಚಲು ದರೋಡೆಕೋರರು ಭಾರೀ ಪ್ಲಾನ್ ಮಾಡಿದ್ದಾರೆ.ಆದರೆ ದರೋಡೆಕೋರರ ಕೃತ್ಯಕ್ಕೆ ಸಹಕಾರ ನೀಡಿದ್ದು ಸ್ಥಳೀಯ ವ್ಯಕ್ತಿಯೇ ಎಂಬ ಸ್ಪೋಟಕ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಬಿಜಾಪುರ,ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ.ಅದರಲ್ಲೂ ಮಂಗಳೂರಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ರಾಜ್ಯದಲ್ಲೇ ಅತೀ ದೊಡ್ಡ ದರೋಡೆ ಪ್ರಕರಣವಾಗಿದೆ. ಬ್ಯಾಂಕ್‌ನಲ್ಲಿದ್ದ ಸುಮಾರು 10 ಕೋಟಿಗೂ ಅಧಿಕ ಮೌಲ್ಯದ ಹಣ, ಚಿನ್ನಾಭರಣವನ್ನು ಹಾಡಹಗಲಲ್ಲೇ ದರೋಡೆ ಮಾಡಲಾಗಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದರೋಡೆ ನಡೆದು ದಿನ ಕಳೆದರೂ ಈವರೆಗೂ ಆರೋಪಿಗಳ ಒಂದೇ ಒಂದು ಸುಳಿವು ಸಿಕ್ಕಿಲ್ಲ. ಇಷ್ಟೊಂದು ದೊಡ್ಡ ಮಟ್ಟದ ದರೋಡೆ ಮಾಡಲು ಸ್ಥಳೀಯ ವ್ಯಕ್ತಿಯೋರ್ವನ ಸಹಕಾರ ಇದೆ ಎಂಬ ಸ್ಪೋಟಕ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಬ್ಯಾಂಕಿನ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಸ್ಥಳೀಯ ವ್ಯಕ್ತಿಯೇ ಈ ದರೋಡೆಯ ಮಾಸ್ಟರ್ ಮೈಂಡ್ ಎನ್ನುವುದು ಪೊಲೀಸರಿಗೆ ಸಿಕ್ಕಿರುವ ಸದ್ಯದ ಮಾಹಿತಿ. ಇದಕ್ಕೆ ಪೂರಕವೆಂಬಂತೆ ಸಿಸಿ ಕ್ಯಾಮೆರಾ ಡಿವಿಆರ್ ಬದಲಾಯಿಸುವ ದಿನ, ಚಿನ್ನ ಪರಿವೀಕ್ಷಕ ಲಾಕರ್ ಓಪನ್ ಮಾಡುವ ಸಮಯ, ದರೋಡೆ ಮಾಡಲು ನಿಗದಿಮಾಡಿದ್ದ ದಿನ ಶುಕ್ರವಾರ ಮಧ್ಯಾಹ್ನ 1 ಗಂಟೆ ಈ ಎಲ್ಲ ಮಾಹಿತಿಯನ್ನು ಆ ಸ್ಥಳೀಯ ವ್ಯಕ್ತಿ ದರೋಡೆಕೋರರಿಗೆ ನೀಡಿದ್ದ ಎನ್ನಲಾಗಿದೆ. ಬ್ಯಾಂಕ್ ಆಸುಪಾಸಿನಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು ಶುಕ್ರವಾರ ಮಧ್ಯಾಹ್ನ 1 ರಿಂದ 1:30 ರೊಳಗೆ ಅಂಗಡಿಯ ವ್ಯಾಪಾರಿಗಳು ಮಸೀದಿಗೆ ನಮಾಜ್‌ಗೆ ಹೋಗುತ್ತಾರೆ. ಹೀಗಾಗಿ ಕೇವಲ 5 ನಿಮಿಷದಲ್ಲೇ ಸಿಕ್ಕಿದ ಚಿನ್ನಾಭರಣವನ್ನು ದೋಚಿಕೊಂಡು ಬರೋ ಪ್ಲಾನ್ ಮಾಡಿದ್ದಾರೆ.. ಆ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಆತನನನ್ನು ವಶಕ್ಕೆ ಪಡೆಯಲು ಹುಡುಕಾಟ ಮುಂದುವರಿಸಿದ್ದಾರೆ. ಇನ್ನೂ ಹಲವು ಮಾಹಿತಿಗಳು ಪೊಲೀಸರಿಗೆ ದೊರೆತಿದ್ದು, ತನಿಖೆ ಪ್ರಗತಿಯಲ್ಲಿರುವ ಕಾರಣ ಮಾಹಿತಿ ಬಹಿರಂಗ ಪಡಿಸಿಲ್ಲ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ