ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಆವರಣದ ದಾಸ್ನಾ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಗಿರಿ ಎಂಬವರ ಶಿಬಿರದ ಬಳಿ ಮುಸ್ಲಿಂ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಓಡಾಡುತ್ತಿದದ್ದು ಕಂಡುಬಂದಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುಸ್ಲಿಂ ವ್ಯಕ್ತಿ ತಮ್ಮ ಶಿಬಿರದ ಹೊರಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಾಣಿಸಿದೆ. ಅಲ್ಲಿದ್ದವರು ಆತನನ್ನು ಪ್ರಶ್ನಿಸಿದಾಗ ತನ್ನ ಹೆಸರು ಅಯುಬ್ ಎಂದು ಬಾಯ್ಬಿಟ್ಟಿದ್ದಾನೆ. ಬಳಿಕ ಶಿಬಿರದ ಸ್ವಯಂ ಸೇವಕರು ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆಗಾಗಿ ಮತ್ತು ಹಲವು ದ್ವೇಷಪೂರಿತ ಭಾಷಣಗಳ ಕೇಸ್ ಗಳು ನರಸಿಂಹಾನಂದ ಸ್ವಾಮೀಜಿ ಮೇಲೆ ದಾಖಲಾಗಿದ್ದವು.
ವಿಶೇಷ ಕಾರ್ಯಾಚರಣೆ ತಂಡ (ಎಸ್ಒಟಿ) ಮತ್ತು ವಿಶೇಷ ಕಾರ್ಯಪಡೆ (ಎಸ್ಟಿಎಫ್) ವ್ಯಕ್ತಿಯನ್ನು ವಿಚಾರಣೆ ನಡೆಸಿದೆ ಎಂದು ಅಖಾರಾ ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿಯನ್ನು ಅಯೂಬ್ ಎಂದು ಗುರುತಿಸಲಾಗಿದ್ದು, ಇಟಾಹ್ ಮೂಲದವರು. ಕುತೂಹಲದಿಂದ ಅಥವಾ ಆಹಾರದ ಹುಡುಕಾಟದಲ್ಲಿ ಆತ ಇಲ್ಲಿ ಇದ್ದ ಎಂದು ತೋರುತ್ತದೆ. ಅವರಿಂದ ಯಾವುದೇ ಅನುಮಾನಾಸ್ಪದ ವಸ್ತುಗಳು ಆತನ ಬಳಿ ಪತ್ತೆಯಾಗಿಲ್ಲ. ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
Click