ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ಮಹಾಕುಂಭ ಮೇಳೆ ನಡೆಯುತ್ತಿದೆ. ಇಂದು(ಜ.29) ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ.
ತ್ರಿವೇಣಿ ಸಂಗಮಕ್ಕೆ ಹೋಗುವ ಮತ್ತು ಹೊರಡುವ ಮಾರ್ಗಗಳನ್ನು ಪ್ರತ್ಯೇಕಿಸಲಾಗಿಲ್ಲ. ಹಾಗಾಗಿ ಮೌನಿ ಅಮಾವಾಸ್ಯೆಯ ಅಮೃತ ಸ್ನಾನಕ್ಕೆಂದು ಹೋಗುವವರು ಪರಸ್ಪರ ತಳ್ಳಲ್ಪಟ್ಟಿದ್ದಾರೆ ಎನ್ನಲಾಗಿದೆ. ತಕ್ಷಣವೇ ಆಂಬ್ಯುಲೆನ್ಸ್ ಗಳನ್ನು ಸ್ಥಳಕ್ಕೆ ಕರೆಸಲಾಯಿತು ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.
ಕುಂಭ ಮೈದಾನದಿಂದ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಈ ವೇಳೆ ರೋಗಿಗಳನ್ನು ಕೆಳಗಿಳಿಸಲಾಯಿತು. ಇಂದು(ಜ.29) ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಊಹಾಪೋಹಗಳು ಎದ್ದಿವೆ ಆದರೆ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ.
Click