ನ್ಯೂಸ್ ನಾಟೌಟ್: ಕಾಳು ಮೆಣಸು ಕೊಯ್ಯುತ್ತಿರುವಂತಹ ಸಂದರ್ಭದಲ್ಲಿ ಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಇದೀಗ ಸುಳ್ಯದ ಜಾಲ್ಸೂರು ಸಮೀಪದ ಕನಕಮಜಲಿನಿಂದ ವರದಿಯಾಗಿದೆ.
ಸಾವನ್ನಪ್ಪಿರುವ ವ್ಯಕ್ತಿಯನ್ನು ಜಗನ್ನಾಥ ಎಂದು ಗುರುತಿಸಲಾಗಿದೆ. ಅವರಿಗೆ 70 ವರ್ಷವಾಗಿತ್ತು. ಅವರು ತೆಂಗಿನ ಮರ ಏರಿ ಕರಿ ಮೆಣಸು ಕೊಯ್ಯುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.