- +91 73497 60202
- [email protected]
- January 8, 2025 2:58 PM
ನ್ಯೂಸ್ ನಾಟೌಟ್ : ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ.ಮತ್ತು ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಗ ಕುಡಿದು ಬಂದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೊಬೈಲ್ ಚಾರ್ಜಿಂಗ್ ವೈರ್ ನಿಂದ ಕುತ್ತಿಗೆಗೆ ಬಿಗಿದು ತಾಯಿ ಹತ್ಯೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್ ಪಿ ನಾಗೇಶ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ