ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಬಹುದು ಎಂದು ಹೇಳಿದ್ದಾರೆ. ವೈಟ್ ಹೌಸ್ನಲ್ಲಿ ಇಬ್ಬರು ನಾಯಕರ ನಡುವೆ ಸಭೆ ನಡೆಯಲಿದೆ. ನರೇಂದ್ರ ಮೋದಿ ಮತ್ತು ಟ್ರಂಪ್ ನಡುವೆ ಫೋನ್ ನಲ್ಲಿ ಮಾತುಕತೆ ನಡೆದಿದೆ. ಮೋದಿ, ಟ್ರಂಪ್ ಅವರ ಎರಡನೇ ಅವಧಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಟ್ರಂಪ್ ಈ ಫೋನ್ ಕರೆಯನ್ನು “ಸಕಾರಾತ್ಮಕ” ಎಂದು ಬಣ್ಣಿಸಿದ್ದಾರೆ. ನ್ಯಾಯಯುತ ಮತ್ತು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳ ಕಡೆಗೆ ಸಾಗುವ ಬಗ್ಗೆ ಮಾತನಾಡಿದ್ದಾಗಿ ಹೇಳಿದ್ದಾರೆ. ಪತ್ರಕರ್ತರಿಗೆ ಹೇಳಿಕೆ ನೀಡಿದ ಟ್ರಂಪ್. “ನಾನು ಇಂದು ಬೆಳಿಗ್ಗೆ (ಸೋಮವಾರ) ಅವರೊಂದಿಗೆ (ನರೇಂದ್ರ ಮೋದಿ) ದೀರ್ಘಕಾಲ ಮಾತನಾಡಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ, ವೈಟ್ ಹೌಸ್ ಗೆ ಬರುತ್ತಾರೆ. ಭಾರತದೊಂದಿಗೆ ನಮಗೆ ಉತ್ತಮ ಸಂಬಂಧವಿದೆ.” ಎಂದಿದ್ದಾರೆ.
ಪ್ರಧಾನಿ ಮೋದಿ ಅವರ ವೈಟ್ ಹೌಸ್ ಭೇಟಿಯ ಯೋಜನೆಯ ಬಗ್ಗೆ ಮಾತುಕತೆ ನಡೆದಿದೆ ಎಂದು ವೈಟ್ ಹೌಸ್ ತಿಳಿಸಿದೆ. ಪ್ರಧಾನಿ ಮೋದಿ ಮತ್ತು ಟ್ರಂಪ್ ಅಮೆರಿಕ-ಭಾರತ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಇಂಡೋ-ಪೆಸಿಫಿಕ್ ಕ್ವಾಡ್ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವುದರ ಮೇಲೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.
Click