- +91 73497 60202
- [email protected]
- January 16, 2025 3:09 AM
ನ್ಯೂಸ್ ನಾಟೌಟ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿ ಈ ರೀತಿಯಾದ ಹವಾಮಾನ ವೈಪರಿತ್ಯಕ್ಕೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಮಂಗನ ಕಾಯಿಲೆ ಕೂಡ ಜನರಲ್ಲಿ ಭೀತಿ ಹುಟ್ಟಿಸಿದೆ. ಮಲೆನಾಡಿಗರು ಮಂಗನಕಾಯಿಲೆಯಿಂದ ಕಂಗಾಲಾಗಿದ್ದಾರೆ. ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಬಂದಿರುವ ದೃಢವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್ ಆರ್ ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತೀವ್ರ ಸ್ವರೂಪ ಪಡೆಯುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಬಗ್ಗೆ ಅಲರ್ಟ್ ಘೋಷಣೆ ಮಾಡಿದೆ. ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ.ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಸುತ್ತಮುತ್ತಲಿನ ಗ್ರಾಮದಲ್ಲಿ DMPA ತೈಲ ಸೇರಿದಂತೆ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಿದ್ದು ಅರಣ್ಯಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ